ನಿಹತ್ಯ ಧಾರ್ತರಾಷ್ಟ್ರಾನ್ ನಃ ಕಾ ಪ್ರೀತಿಃ ಸ್ಯಾತ್ ಜನಾರ್ದನ |
ಪಾಪಮ್ ಏವ ಆಶ್ರಯೇತ್ ಅಸ್ಮಾನ್ ಹತ್ವಾ ಏತಾನ್ ಆತತಾಯಿನಃ -- ಧಾರ್ತರಾಷ್ಟ್ರರನ್ನು ಕೊಂದು
ನಮಗಾದರೂ ಏನು ಸುಖವುಂಟು ಜನಾರ್ದನಾ? ಈ ಕುಲಗೇಡಿಗಳನ್ನು ಕೊಂದರೆ ನಮಗೆ ಪಾಪವೇ ತಟ್ಟೇತು.
ಒಂದು ವೇಳೆ ಧಾರ್ತರಾಷ್ಟ್ರರನ್ನು ಕೊಂದರೆ ನಮಗೆ ಆನಂದವೇನು? ಅದರಿಂದ ಸಾಯುವ ತನಕ ನಿರಂತರ
ಪಾಪಪ್ರಜ್ಞೆ ನಮ್ಮನ್ನು ಕಾಡಬಹುದು. ಇವರನ್ನು ಕೊಂದು ಪಾಪಪ್ರಜ್ಞೆಯಿಂದ ಬದುಕಬೇಕೇ ಹೊರತು ಇನ್ನೆ ೀನೂ
ಲಾಭವಿಲ್ಲ-ಇದು ಅರ್ಜುನನ ವಾದ.
ಈ ಶ್ಲೋಕದಲ್ಲಿ ಅರ್ಜುನ "ಆತತಾಯಿ" ಎನ್ನುವ ಪದವನ್ನು ಬಳಸಿದ್ದಾನೆ. ಆತತಾಯಿ ಎಂದರೆ ಇನ್ನೊಬ್ಬರ
ಮನೆಗೆ ಬೆಂಕಿ ಹಾಕುವವ; ಇನ್ನೊಬ್ಬರ ಆಹಾರಕ್ಕೆ ವಿಷ ಬೆರೆಸಿ ಕೊಡುವವ; ಇನ್ನೊಬ್ಬರ ಆಸ್ತಿಯನ್ನು
ಲಪಟಾಯಿಸುವವ; ಪರ ಸ್ತ್ರೀಯರ ಮೇಲೆ ಕೈ ಹಾಕುವವ ಇತ್ಯಾದಿ. ಶಾಸ್ತ್ರ 'ಆತತಾಯಿನರನ್ನು' ಕಂಡಲ್ಲಿ
ಹೊಡೆದು ಸಾಯಿಸು ಎನ್ನುತ್ತದೆ. ಇಲ್ಲಿ ದುರ್ಯೋಧನ ಮೇಲಿನ ಎಲ್ಲಾ ಕೆಟ್ಟ ಕೆಲಸವನ್ನೂ ಮಾಡಿದ್ದ. ಭೀಮನಿಗೆ
ವಿಷ ಸೇರಿಸಿ ಕೊಟ್ಟಿದ್ದ, ದ್ರೌಪದಿ ವಸ್ತ್ರಾಪಹರಣ ಮಾಡಿದ್ದ, ಪಾಂಡವರಿದ್ದ ಅರಗಿನ ಮನೆಗೆ ಬೆಂಕಿ ಇಟ್ಟಿದ್ದ. ಆದರೆ
ಇಲ್ಲಿ ಅರ್ಜುನನಿಗೆ ಬಂಧು ಪ್ರೇಮ ಎಲ್ಲಿಯವರೆಗೆ ಕಾಡುತ್ತಿದೆ. ಎಂದರೆ ಆತ “ಇವರೆಲ್ಲರೂ
ಆತತಾಯಿನರಾದರೂ ಕೂಡಾ, ನನ್ನ ದೊಡ್ಡಪ್ಪನ ಮಕ್ಕಳಲ್ಲವೇ?” ಎಂದು ಕೃಷ್ಣನಲ್ಲಿ ಪರಿತಪಿಸುತ್ತಾನೆ.
ಈ ಶ್ಲೋಕದಲ್ಲಿ ಅರ್ಜುನ ಶ್ರೀಕೃಷ್ಣನನ್ನು 'ಜನಾರ್ದನ' ಎಂದು ಸಂಬೋಧಿಸಿದ್ದಾನೆ. ಜನಾರ್ದನ ಎಂದರೆ
ದುರ್ಜನ ಸಂಹಾರಕ ಹಾಗೂ ಸಜ್ಜನರಿಗೆ ಮುಂದೆ ಹುಟ್ಟಿಲ್ಲದ ಮೋಕ್ಷಪ್ರದವಾದ ಸಾವನ್ನು ಕೊಡುವವ.
"ಮೋಕ್ಷಪ್ರದನಾದ ನೀನು ಮತ್ತೆ ಪುನಃ ಈ ಹುಟ್ಟು-ಸಾವಿನ ಚಕ್ರದಲ್ಲಿ ಬರುವ ಈ ಯುದ್ಧದಲ್ಲಿ ನಮ್ಮನ್ನು ಏಕೆ
ತೊಡಗಿಸುತ್ತಿರುವೆ? ಯುದ್ಧ ಎಂದೂ ಮೋಕ್ಷಪ್ರದವಲ್ಲ, ಅದು ಸೇಡು-ದ್ವೇಷದಿಂದ ಕೂಡಿರುತ್ತದೆ. ಹಾಗಿರುವಾಗ
ಈ ಯುದ್ಧ ಏಕೆ?” ಎನ್ನುವುದು ಈ ಸಂಬೋಧನೆಯ ಹಿಂದಿರುವ ಧ್ವನಿ.
‘O Madhusudana!41 I don’t want to kill them, even if they kill me, even for
the kingdoms of the three worlds, forget this earth.’
(36)
‘O Janardana!42 What pleasure will we derive from killing the sons of
Dhritarashtra? Although they are criminals,43 sin alone will be our lot if we
kill them.’
36. By killing these sons of Dhritarashtra, what pleasure can be ours, O Janardana? Only sin will accrue by killing these felons.
Source: Bhagavad Gita — pages/page-0032.txt p.32, lines 29-30; pages/page-0032.txt p.32, lines 32-33
ನಿಹತ್ಯ ಧಾರ್ತರಾಷ್ಟ್ರಾನ್ ನಃ ಕಾ ಪ್ರೀತಿಃ ಸ್ಯಾತ್ ಜನಾರ್ದನ | ಪಾಪಮ್ ಏವ ಆಶ್ರಯೇತ್ ಅಸ್ಮಾನ್ ಹತ್ವಾ ಏತಾನ್ ಆತತಾಯಿನಃ -- ಧಾರ್ತರಾಷ್ಟ್ರರನ್ನು ಕೊಂದು ನಮಗಾದರೂ ಏನು ಸುಖವುಂಟು ಜನಾರ್ದನಾ? ಈ ಕುಲಗೇಡಿಗಳನ್ನು ಕೊಂದರೆ ನಮಗೆ ಪಾಪವೇ ತಟ್ಟೇತು. ಒಂದು ವೇಳೆ ಧಾರ್ತರಾಷ್ಟ್ರರನ್ನು ಕೊಂದರೆ ನಮಗೆ ಆನಂದವೇನು? ಅದರಿಂದ ಸಾಯುವ ತನಕ ನಿರಂತರ ಪಾಪಪ್ರಜ್ಞೆ ನಮ್ಮನ್ನು ಕಾಡಬಹುದು. ಇವರನ್ನು ಕೊಂದು ಪಾಪಪ್ರಜ್ಞೆಯಿಂದ ಬದುಕಬೇಕೇ ಹೊರತು ಇನ್ನೆ ೀನೂ ಲಾಭವಿಲ್ಲ-ಇದು ಅರ್ಜುನನ ವಾದ. ಈ ಶ್ಲೋಕದಲ್ಲಿ ಅರ್ಜುನ "ಆತತಾಯಿ" ಎನ್ನುವ ಪದವನ್ನು ಬಳಸಿದ್ದಾನೆ. ಆತತಾಯಿ ಎಂದರೆ ಇನ್ನೊಬ್ಬರ ಮನೆಗೆ ಬೆಂಕಿ ಹಾಕುವವ; ಇನ್ನೊಬ್ಬರ ಆಹಾರಕ್ಕೆ ವಿಷ ಬೆರೆಸಿ ಕೊಡುವವ; ಇನ್ನೊಬ್ಬರ ಆಸ್ತಿಯನ್ನು ಲಪಟಾಯಿಸುವವ; ಪರ ಸ್ತ್ರೀಯರ ಮೇಲೆ ಕೈ ಹಾಕುವವ ಇತ್ಯಾದಿ. ಶಾಸ್ತ್ರ 'ಆತತಾಯಿನರನ್ನು' ಕಂಡಲ್ಲಿ ಹೊಡೆದು ಸಾಯಿಸು ಎನ್ನುತ್ತದೆ. ಇಲ್ಲಿ ದುರ್ಯೋಧನ ಮೇಲಿನ ಎಲ್ಲಾ ಕೆಟ್ಟ ಕೆಲಸವನ್ನೂ ಮಾಡಿದ್ದ. ಭೀಮನಿಗೆ ವಿಷ ಸೇರಿಸಿ ಕೊಟ್ಟಿದ್ದ, ದ್ರೌಪದಿ ವಸ್ತ್ರಾಪಹರಣ ಮಾಡಿದ್ದ, ಪಾಂಡವರಿದ್ದ ಅರಗಿನ ಮನೆಗೆ ಬೆಂಕಿ ಇಟ್ಟಿದ್ದ. ಆದರೆ ಇಲ್ಲಿ ಅರ್ಜುನನಿಗೆ ಬಂಧು ಪ್ರೇಮ ಎಲ್ಲಿಯವರೆಗೆ ಕಾಡುತ್ತಿದೆ. ಎಂದರೆ ಆತ “ಇವರೆಲ್ಲರೂ ಆತತಾಯಿನರಾದರೂ ಕೂಡಾ, ನನ್ನ ದೊಡ್ಡಪ್ಪನ ಮಕ್ಕಳಲ್ಲವೇ?” ಎಂದು ಕೃಷ್ಣನಲ್ಲಿ ಪರಿತಪಿಸುತ್ತಾನೆ. ಈ ಶ್ಲೋಕದಲ್ಲಿ ಅರ್ಜುನ ಶ್ರೀಕೃಷ್ಣನನ್ನು 'ಜನಾರ್ದನ' ಎಂದು ಸಂಬೋಧಿಸಿದ್ದಾನೆ. ಜನಾರ್ದನ ಎಂದರೆ ದುರ್ಜನ ಸಂಹಾರಕ ಹಾಗೂ ಸಜ್ಜನರಿಗೆ ಮುಂದೆ ಹುಟ್ಟಿಲ್ಲದ ಮೋಕ್ಷಪ್ರದವಾದ ಸಾವನ್ನು ಕೊಡುವವ. "ಮೋಕ್ಷಪ್ರದನಾದ ನೀನು ಮತ್ತೆ ಪುನಃ ಈ ಹುಟ್ಟು-ಸಾವಿನ ಚಕ್ರದಲ್ಲಿ ಬರುವ ಈ ಯುದ್ಧದಲ್ಲಿ ನಮ್ಮನ್ನು ಏಕೆ ತೊಡಗಿಸುತ್ತಿರುವೆ? ಯುದ್ಧ ಎಂದೂ ಮೋಕ್ಷಪ್ರದವಲ್ಲ, ಅದು ಸೇಡು-ದ್ವೇಷದಿಂದ ಕೂಡಿರುತ್ತದೆ. ಹಾಗಿರುವಾಗ ಈ ಯುದ್ಧ ಏಕೆ?” ಎನ್ನುವುದು ಈ ಸಂಬೋಧನೆಯ ಹಿಂದಿರುವ ಧ್ವನಿ.
Source: Bhagavad Gita Pravachana — pages/page-0033.txt p.33, lines 3-23
‘O Madhusudana!41 I don’t want to kill them, even if they kill me, even for the kingdoms of the three worlds, forget this earth.’ (36) ‘O Janardana!42 What pleasure will we derive from killing the sons of Dhritarashtra? Although they are criminals,43 sin alone will be our lot if we kill them.’
Source: The Bhagavad Gita — structure/page-0047.json p.47, lines 1-1; pages/page-0048.txt p.48, lines 34-35; pages/page-0049.txt p.49, lines 1-5
Reader discussion
No public reader discussion yet.